ಈಗಾಗಲೇ ಎಲ್ಲೆಡೆ ಸಂಚಲನ ಮೂಡಿಸಿರುವ ಬಹು ನಿರೀಕ್ಷಿತ “ಉತ್ತರಕಾಂಡ” ಚಿತ್ರದಲ್ಲಿ ಅಭಿನಯಾಸುರ ರಂಗಾಯಣ ರಘು ನಟಿಸಲಿದ್ದಾರೆ. “ಬಂಡೆ ಕಾಕಾ” ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
“ಉತ್ತರಕಾಂಡ” ರೋಹಿತ್ ಪದಕಿ ನಿರ್ದೇಶನದ ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಕೆ.ಆರ್.ಜಿ.ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ.






