ಜೆಡಿಎಸ್ ಪರ ನಿಂತ ಸಂಜಯ್ ರೌತ್

ಮುಂಬೈ: ಕರ್ನಾಟಕದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಖರೀದಿಸಲು ಬಿಜೆಪಿ ಯತ್ನಿಸಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಮೈತ್ರಿಕೂಟ ಶಿವಸೇನೆಯ ನಾಯಕ ಸಂಜಯ್ ರಾವುತ್, ಶಾಸಕರನ್ನು ತಮ್ಮತ್ತ ಸೆಳೆಯಲು ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ, ಕೇಂದ್ರ ಸರ್ಕಾರದ ಸಂಸ್ಥೆಗಳನ್ನು ಬಳಸಿಕೊಂಡು ಒತ್ತಡ ತಂತ್ರ ಅನುಸರಿಸಲಾಗುತ್ತಿದೆ. ಇದು ರಾಜಕೀಯದಲ್ಲಿ ಕೊಳಕು ಬೆಳವಣಿಗೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ 104 ಕ್ಷೇತ್ರಗಳಲ್ಲಿ ಗೆದ್ದಿದೆ. ಕಾಂಗ್ರೆಸ್ – ಜೆಡಿಎಸ್ ಪಕ್ಷಗಳು ಸರ್ಕಾರ ರಚಿಸುವಷ್ಟು ಬಹುಮತ ಹೊಂದಿವೆ ಎಂದಿರುವ ಅವರು ಕೇಂದ್ರ ಸರ್ಕಾರ ಸರ್ಕಾರದ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿರುವ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 100 ಕೋಟಿ ರೂ. ಆಮಿಶ ಒಡ್ಡಿರುವ ಸಂಗತಿ ಭಾರತದ ಪ್ರಜಾಪ್ರಭುತ್ವದ ಕರಾಳ ಮುಖವನ್ನು ಜಾಗತಿಕ ಮಟ್ಟದಲ್ಲಿ ತೋರಿಸಿದೆ ಎಂದು ಅವರು ಕಿಡಿಕಾರಿದ್ದಾರೆ.

ಜೆಡಿಎಸ್​​ಗೆ ಸರ್ಕಾರ ರಚಿಸಲು ಅವಕಾಶ ನೀಡದಿದ್ದಲ್ಲಿ ವಿಪಕ್ಷಗಳು ಸಂಸತ್ತಿನಲ್ಲಿ ಪ್ರತಿಭಟಿಸುತ್ತವೆ ಎಂದು ಶಿವಸೇನಾ ನಾಯಕ ಸಂಜರ್ ರೌತ್ ಹೇಳಿದ್ದಾರೆ. ರಾಜ್ಯ ರಾಜಕಾರಣದ ಅನಿಶ್ಚಿತತೆ ಕುರಿತು ಪ್ರತಿಕ್ರಿಯಿಸಿರುವ ಅವರು, ನೈತಿಕವಾಗಿ ಬಿಜೆಪಿಗೆ ಸರ್ಕಾರ ರಚಿಸಲು ಮೊದಲ ಅವಕಾಶ ನೀಡಬೇಕು ಎಂದಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್​ಗೆ 116 ಶಾಸಕರ ಬೆಂಬಲವಿದೆ. ರಾಜ್ಯಪಾಲರು ಇವರಿಗೆ ಅವಕಾಶ ನೀಡಬೇಕು ಎಂದು ಅವರು ಹೇಳಿದ್ದಾರೆ. ಇಲ್ಲವಾದಲ್ಲಿ ಸಂಸತ್ತಿನ ಕಲಾಪಕ್ಕೆ ಅಡ್ಡಿಯುಂಟಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಬಿಜೆಪಿ ನೈತಿಕ ನೆಲೆಗಟ್ಟಿನ ಮೇಲೆ ಸರ್ಕಾರ ರಚಿಸಲು ಮುಂದಾಗಬೇಕು ಎಂದು ಅವರು ಬಿಜೆಪಿಗೆ ಸಲಹೆ ನೀಡಿದ್ದಾರೆ.

1+

Leave a Reply

Your email address will not be published. Required fields are marked *