ಧಾರವಾಡ : ಹಿರಿಯ ಸಾಹಿತಿ 96 ರ ಹರೆಯದ ಗುರುಲಿಂಗ ಕಾಪಸೆ ಇನ್ನಿಲ್ಲ. ಧಾರವಾಡದ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಅವರು ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳವಾರ ರಾತ್ರಿ ಅವರು ಇಹಲೋಕ ಯಾತ್ರೆಯನ್ನು ಮುಗಿಸಿದರು.
ಗುರುಲಿಂಗ ಕಾಪಸೆ ಅವರ ಮೂಲ ಊರು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ ಬಿಕೆ ಗ್ರಾಮ. ಸದ್ಯ ಧಾರವಾಡದ ಸಪ್ತಾಪುರ ದುರ್ಗಾ ಕಾಲೋನಿಯಲ್ಲಿ ನೆಲೆಸಿದ್ದರು. ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದರು.
1928ರ ಎಪ್ರಿಲ್ 2ರಂದು ಜನಿಸಿದ ಗುರುಲಿಂಗ ಕಾಪಸೆ ಅವರು ತಮ್ಮ 96ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇಂದು ಮಧ್ಯಾಹ್ನ 2 ರವರೆಗೆ ದುರ್ಗಾ ಕಾಲೋನಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುಲಿಂಗ ಕಾಪಸೆ ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ.
