ನನ್ನ ದನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ: ಸಂಜೀವ್ ಭಟ್ ಪತ್ನಿ ಶ್ವೇತಾ ಹೇಳಿಕೆ

ದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಮತ್ತು ಆರ್​ಎಸ್​ಎಸ್ ವಿರುದ್ಧ ಅಭಿಯಾನ ನಡೆಸುತ್ತಿದ್ದ ಅಮಾನತುಗೊಂಡ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ ಪತ್ನಿ ಶ್ವೇತಾ ಸಂಜೀವ್ ಭಟ್, ನಾನು ಸಂಜೀವ್ ಭಟ್ ಅವರನ್ನು ಬೆಂಬಲಿಸುತ್ತೇನೆ. ನನ್ನ ದನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹೇಳಿರುವ 9 ಸೆಕೆಂಡ್​ಗಳ ವಿಡಿಯೋವನ್ನು ಸಂಜೀವ್ ಭಟ್ ಅವರ ಟ್ವೀಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ. #EnoughIsEnough #JusticeforSanjivBhatt ಹ್ಯಾಷ್​ಟ್ಯಾಗ್​ನಡಿ ಅವರು ಟ್ವೀಟ್ ಮಾಡಿದ್ದು, ಕೆಲವೇ ಕ್ಷಣಗಳಲ್ಲಿ ಈ ಟ್ವೀಟ್ ವೈರಲ್ ಆಗಿದೆ.

ಕಳೆದ ಸೆಪ್ಟಂಬರ್ ತಿಂಗಳಲ್ಲಿ 20 ವರ್ಷ ಹಳೆಯ ಮಾದಕ ದ್ರವ್ಯ ಪ್ರಕರಣದಲ್ಲಿ ಸಂಜೀವ್ ಭಟ್ ಅವರನ್ನು ಬಂಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಂಜೀವ್ ಭಟ್ ಬಿಡುಗಡೆಗೆ ಸಾಮಾಜಿಕ ಜಾಲತಾಣಿಗರು ಒತ್ತಾಯಿಸಿದ್ದರು.

0

Leave a Reply

Your email address will not be published. Required fields are marked *