ಬೆಂಗಳೂರು : ಈಗ ವಿದೇಶದಲ್ಲಿ ಕುಳಿತಿದ್ದಾರೆ ಎಂದು ನಂಬಲಾದ ಹಾಸನ ಸಂಸತ್ ಸದಸ್ಯ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್ ಔಟ್ ನೊಟೀಸ್ ಹೊರಡಿಸಿದ್ದಾರೆ.
ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಪ್ರಜ್ವಲ್ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ.
ಎಸ್ಐಟಿ ನೀಡಿದ ಲುಕ್‌ಔಟ್ ನೋಟಿಸ್ ಬಳಿಕವೂ ಪ್ರಜ್ವಲ್ ರೇವಣ್ಣ ಪತ್ತೆಯಾಗದಿದ್ದರೆ, ಅವರ ಪತ್ತೆಗೆ ಕೋರ್ಟ್‌ನಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.






