ಮಾಜಿ ಪ್ರಧಾನಿಗೆ ಜನ್ಮದಿನದ ಶುಭಾಷಯ ಕೋರಿದ ಹಾಲಿ ಪ್ರಧಾನಿ

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಕರೆ ಮಾಡಿ ಜನ್ಮದಿನದ ಶುಭಾಷಯ ಕೋರಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಅವರ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಜೆಡಿ(ಎಸ್) ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಶುಭ ಕೋರಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ, ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿರುವ ಕೀರ್ತಿ ನಿಮ್ಮದು ಎಂದಿರುವ ಅವರು, ನಾಡಿನ ನೆಲ, ಜಲ, ಭಾಷೆ ಬಗೆಗಿನ ನಿಮ್ಮ ಬದ್ಧತೆ ನಮಗೆಲ್ಲರಿಗೂ ಸ್ಪೂರ್ತಿದಾಯಕ. ನೂರು ಕಾಲ ಆಯುಷ್ಯ- ಆರೋಗ್ಯ ನಿಮ್ಮದಾಗಲಿ ಎಂದಿದ್ದಾರೆ.

0

Leave a Reply

Your email address will not be published. Required fields are marked *