ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿ ಸಿಕ್ಕಿಹಾಕಿಕ್ಕೊಂಡ ಕುಮಾರಣ್ಣ : ಸೊಮೋಟೊ ಪ್ರಕರಣ ದಾಖಲಿಸಿಕೊಂಡ ಮಹಿಳಾ ಆಯೋಗ

H D Kumaraswamy : ಕುಮಾರಸ್ವಾಮಿ ಹೇಳಿಕೆಯನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಸುಮೋಟೋ‌ ಪ್ರಕರಣ ದಾಖಲಿಸಿಕೊಂಡಿದ್ದು, ನೋಟಿಸ್‌ ಜಾರಿ ಮಾಡಲಿದೆ

ಬೆಂಗಳೂರು : ಮಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮಾತನಾಡಿ ಹಲವು ಬಾರಿ ಪಜೀತಿಗೆ ಸಿಲುಕಿಕೊಂಡಿದ್ದಾರೆ. ಮಾತನಾಡದೇ ತೊಂದರೆ ಅನುಭವಿಸಿದ್ದಕ್ಕಿಂತ ಮಾತನಾಡಿ ಸಿಕ್ಕಿ ಹಾಕಿಕೊಂಡಿದ್ದೇ ಹೆಚ್ಚು. ಈಗ ಹಳ್ಳಿ ಹೆಣ್ಣು ಮಕ್ಕಳ ಬಗ್ಗೆ ಮಾತನಾಡಿ ಗೋಡೆ ಮೈ ಮೇಲೆ ಕೆಡವಿಕೊಂಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಅವರು ಹೇಳಿದ್ದರು. ಈಗ ಅವರ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದೆ.

ಈ ಹೇಳಿಕೆ ನೀಡುವ ಮೂಲಕ ಹೆಚ್‌ಡಿ ಕುಮಾರಸ್ವಾಮಿ ಅವರು ಮಹಿಳೆಯರ ಘನತೆಗೆ, ಚಾರಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಈ ಹಿನ್ನಲೆಯಲ್ಲಿ ಕುಮಾರಸ್ವಾಮಿ ಹೇಳಿಕೆಯನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಸುಮೋಟೋ‌ ಪ್ರಕರಣ ದಾಖಲಿಸಿಕೊಂಡಿದ್ದು, ನೋಟಿಸ್‌ ಜಾರಿ ಮಾಡಲಿದೆ.

ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಕುಮಾರಸ್ವಾಮಿ ನೀಡಿದ ಪ್ರತಿಕ್ರಿಯೆ, ನಾನು ಮಹಿಳೆಯರನ್ನು ಅಪಮಾನ ಮಾಡಿಲ್ಲ. ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಮಹಿಳೆಯರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದೆ ಅಷ್ಟೆ. ನಾನು ಸಿಎಂ ಆಗಿದ್ದಾಗ ಮಹಿಳೆಯರಿಗಾಗಿ ಸಾಕಷ್ಟು ಯೋಜನೆ ತಂದಿದ್ದೇನೆ. ಮಹಿಳೆಯರ‌ ಕೂಗಿಗೆ ಸ್ಪಂದಿಸಿ ರಾಜ್ಯದಲ್ಲಿ ಸರಾಯಿ‌ ನಿಷೇಧಿಸಿದ್ದೇನೆ. ಮಹಿಳೆಯರ ಬಗ್ಗೆ ನಾನು ಕೇವಲವಾಗಿ ಮಾತನಾಡುವುದಿಲ್ಲ.

Author

Leave a Reply

Your email address will not be published. Required fields are marked *