ನವದೆಹಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಹಾರದ ಮೇಲೆ ನಿಗಾ ಇಡಲಾಗಿದೆ. ಜೊತೆಗೆ ಅವರ ಹತ್ಯೆ ಸಂಚು ರೂಪಿಸಲಾಗುತ್ತಿದೆ ಎಂದು ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ಆರೋಪಿಸಿದ್ದಾರೆ.
ತಿಹಾರ ಜೈಲಿನಲ್ಲೇ ಅವರನ್ನು ಮುಗಿಸಲು ಸಂಚು ರೂಪಿಸಲಾಗುತ್ತಿದೆ. ಅವರಿಗೆ ನೀಡುವ ಆಹಾರದ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ. ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಅವರು ತೆಗೆದುಕೊಳ್ಳುವ ಆಹಾರದ ಚಿತ್ರೀಕರಣಕ್ಕೂ ಕ್ಯಾಮರಾ ಅಳವಡಿಸಲಾಗಿದೆ. ಅವರು ಕಳೆದ 12 ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅದಕ್ಕಾಗಿ ಅವರು ಇನ್ಸುಲಿನ್ ತೆಗೆದುಕೊಳ್ಳುತ್ತಾರೆ. ಆದರೆ ಜೈಲಿನಲ್ಲಿ ಅವರಿಗೆ ಇನ್ಸುಲಿನ್ ನೀಡುತ್ತಿಲ್ಲ ಎಂದು ಅವರು ಆಪಾದಿಸಿದರು.
ರಾಂಚಿಯಲ್ಲಿ ನಡೆಯುತ್ತಿರುವ ಇಂಡಿಯಾ ಮೈತ್ರಿ ಕೂಟದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.






