ಬಾಲಕನ ಹತ್ಯೆ: ಕೇಂದ್ರಕ್ಕೆ 3 ವಾರದ ಒಳಗೆ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಹರಿಯಾಣದ ರ‍್ಯಾನ್​ ಶಾಲೆಯ 7 ವರ್ಷದ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಬೆಳವಣಿಗೆಗಳು ನಡೆದಿವೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಬಾಲಕನ ಪೋಷಕರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಭದ್ರತೆ ಕುರಿತು ಮೂರು ದಿನಗಳ ಒಳಗೆ ವರದಿ ಸಲ್ಲಿಸುವಂತೆ ಹರಿಯಾಣ ಸರ್ಕಾರಕ್ಕೆ ಸೂಚಿಸಿದೆ.

ಶಾಲೆಯ ಸಿಇಒ ರ‍್ಯಾನ್ ಪಿಂಟೊರನ್ನು ಯಾವುದೇ ಕ್ಷಣದಲ್ಲಾದ್ರೂ ಪೊಲೀಸರು ವಿಚಾರಣೆ ನಡೆಸುವ ಸಾಧ್ಯತೆ ಇದೆ. ಶಾಲೆಯ ಪ್ರಾಂಶುಪಾಲರಿಗೂ ಪೊಲೀಸರು ಸಮನ್ಸ್​ ಜಾರಿ ಮಾಡಿದ್ದು, ವಿಚಾರಣೆಗೆ ಒಳಪಡಿಸಲಿದ್ದಾರೆ. ಇಂದು ಬೆಳಿಗ್ಗೆ ಪ್ರಾದೇಶಿಕ ವ್ಯವಸ್ಥಾಪಕ, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

0

Leave a Reply

Your email address will not be published. Required fields are marked *