ಕಲಬುರ್ಗಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಆರೋಪಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅದರಲ್ಲಿ ಕಲ್ಯಾಣ ಕರ್ನಾಟಕದ ರಾಜಧಾನಿ ಕಲಬುರಗಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇಲ್ಲಿನ ಕಾನೂನು ಸುವ್ಯವಸ್ಥೆ ಹಾಳಾಗಲೂ ಸಚಿವ ಪ್ರಿಯಾಂಕ ಖರ್ಗೆ ರೂವಾರಿ ಇದ್ದಂತೆ ಕಾಣ್ತಿದೆ. ಕಲಬುರಗಿಯಲ್ಲಿ ಅಂಬೇಡ್ಕರ್ ಅಪಮಾನ ಪ್ರಕರಣ ಇದನ್ನೆಲ್ಲ ನೋಡಿದ್ರೆ ಕಲಬುರಗಿ ಗುಂಡಾ ಸಂಸ್ಕೃತಿ ತಲೆ ಎತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಅಪರಾಧ ಪ್ರಕರಣಗಳು ನಡೆಯುತ್ತಿದ್ದರೂ ಕಾನೂನು ಸಚಿವರು, ಸಿಎಂ ಯಾಕೆ ಸುಮ್ಮನಿದ್ದಾರೆ ಗೊತ್ತಾಗುತ್ತಿಲ್ಲ. ಇದನ್ನೇಲ್ಲ ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಉಳಿಯೋದಿಲ್ಲ ಎಂದು ಭವಿಷ್ಯ ನುಡಿದರು.
ಇದೆ ವೇಳೆ ಮಾತನಾಡಿದ ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಅದು ಪ್ರಜ್ವಲ್ ರೇವಣ್ಣ ಆದರೂ ಅಷ್ಟೆ ಯಾರಾದ್ರು ಅಷ್ಟೆ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಬೇಕು ಎಂದು ಹೇಳಿದರು.
ಜೂನ್ 4ರ ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಕಥೆ ಏನು ಅಂತ ತಿಳಿಯುತ್ತೆ. ಯಾರಲ್ಲಿ ವಿರೋಧಿ ಬಣ ಉಲ್ಬಣವಾಗಿದೆ ಎಂದು ಜನರಿಗೆ ತಿಳಿದಿದೆ ಜನ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದರು.
