ನವದೆಹಲಿ : ಭಾರತದಲ್ಲಿ ನಡೇಯುತ್ತಿರುವ ಚುನಾವಣೆಯ ಬಗ್ಗೆ ವಿಶ್ವ ಸಂಸ್ಥೆ ವ್ಯಕ್ತಪಡಿಸಿರುವ ಅಭಿಪ್ರಾಯದ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ್ ತೀವ್ರ ರೂಪದ ಪ್ರತಿಕ್ರಿಯೆ ನೀಡಿದ್ದಾರೆ,
ಭಾರತದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಬೇಕು ಎಂದು ವಿಶ್ವ ಸಂಸ್ಥೆ ಹೇಳಿತ್ತು. ಇದು ಭಾರತವನ್ನು ಕೆರಳಿಸಿದೆ.
ನಿನ್ನೆ ತಿರವನಂತಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಜೈಶಂಕರ್ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಚುನಾವಣೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯಬೇಕು ಎಂದು ಹೇಳುವ ಅಗತ್ಯ ಇಲ್ಲ. ನಮ್ಮ ಜೊತೆ ಭಾರತದ ಜನರಿದ್ದಾರೆ. ಅವರು ಸದಾ ನ್ಯಾಯಸಮ್ಮತವಾಗಿ ಇರುತ್ತಾರೆ. ಈ ಬಗ್ಗೆ ಚಿಂತಿಸುವ ಅಗತ್ಯ ಇಲ್ಲ ಎಂದಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಮತ್ತು ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಿರುವ ಬಗ್ಗೀ ವಿಶ್ವ ಸಂಸ್ಥೆ ಈ ಪ್ರತಿಕ್ರಿಯೆ ನೀಡಿತ್ತು.
ನಿನ್ನೆ ತಿರುವನಂತಪುರದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳುತ್ತಿದ್ದ ಸಂದರ್ಭದಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದರು.
