ಎಂಡಿಎಂ ಪ್ರೊಡಕ್ಷನ್ ಲಾಂಛನಲದಲ್ಲಿ ನಿರ್ಮಾಣವಾಗಿರುವ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ನಟಿ ರಮ್ಯಾ ನಟಿಸಿರುವ ರಕ್ತ ಕಾಶ್ಮೀರ ಚಿತ್ರ ತೆರೆಗೆ ಬರಲು ಅಣಿಯಾಗಿದ್ದು, ಚಿತ್ರವನ್ನು ತೆರೆಗೆ ತರಲು ಪ್ರಯತ್ನ ನಡೆಯುತ್ತಿದೆ.

ಪಾಕ್ ಆಕ್ರಮಿತ ಕಾಶ್ಮೀರವನ್ನು ಮರಳಿ ಪಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಈ ಚಿತ್ರದಲ್ಲಿ ಬಳಿಸಿಕೊಳ್ಳಲಾಗಿದೆ. ಇದೇ ಚಿತ್ರದ ಪ್ರಮುಖ ಕಥಾಹಂದರವಾಗಿದೆ. ಗಡಿ ಪ್ರದೇಶ ಅಷ್ಟೆ ಅಲ್ಲ. ಬೆಂಗಳೂರಿನಲ್ಲೂ ಉಗ್ರಗಾಮಿಗಳ ಕಾಣವಿದೆ. ಅದರ ನಿರ್ಮೂಲನೆಗೆ ಸಂಬಂಧಿಸಿದ ಕಥಾಹಂದರವನ್ನೂ ಈ ಚಿತ್ರ ಹೊಂದಿದೆ.

ಎಸ್ ವಿ ರಾಜೇಂದ್ರ ಸಿಂಗ್ ಬಾಬು ಅವರೆ ರಕ್ತಕಾಶ್ಮೀರ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆ ಎಂ ಎಸ್ ರಮೇಶ್ ಅವರದು. ಗುರುಕಿರಣ ಸಂಗೀತ ನಿರ್ದೇಶನದ ಈ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ, ನಟಿ ರಮ್ಯಾ, ಹಿರಿಯ ನಟ ದೊಡ್ಡಣ್ಣ, ಓಂ ಪ್ರಕಾಶ್ ರಾವ್, ಅನಿಲ (ತೆಲುಗು ನಟಿ), ಕುರಿ ಪ್ರತಾಪ್ ಮುಂತಾದವರಿದ್ದಾರೆ.

Author

Leave a Reply

Your email address will not be published. Required fields are marked *