ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣ ವಚನ ಸ್ವೀಕಾರ

High Court : ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಿಗೆ ರಾಜ್ಯದ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅವರು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ ರಾವ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.

ಇಂದು ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಿಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅವರು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹೈಕೋರ್ಟ್ ಮುಖ್ಯ ನ್ಯಾಯಮೂತಿಗಳಾದ ನಿಲಯ್ ವಿಪಿನ್‍ಚಂದ್ರ ಅಂಜಾರಿಯಾ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ  ಡಾ. ರಜನೀಶ್ ಗೋಯಲ್ ಸೇರಿದಂತೆ ನ್ಯಾಯಮೂತಿಗಳು, ವಕೀಲರು, ಗಣ್ಯರುಗಳು ಉಪಸ್ಥಿತರಿದ್ದರು.

Author

error: