ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣ ಅಕ್ರಮವಾಗಿ ವರ್ಗಾವಣೆ ಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐಗೆ ಬ್ಯಾಂಕ್ ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್ ದಾಖಲಿಸಬಹುದು ಅಂತ ಕಾನೂನು ಇದೆ. ಅದರಂತೆ ಸಿಬಿಐ ಕೇಸ್ ತೆಗೆದುಕೊಂಡಿದೆ. ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ಕೊಡಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಇಲಾಖೆಗಳ ತನಿಖೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಸಿಬಿಐ ಪತ್ರ ಬರೆದ ಮೇಲೆ ತೀರ್ಮಾನ ಮಾಡಬೇಕು. ಸರ್ಕಾರಕ್ಕೆ ಪತ್ರ ಬರೆದ ಮೇಲೆ ಸಚಿವರ ತನಿಖೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಸಚಿವರನ್ನು ಕರೆದು ಸಿಬಿಐ ತನಿಖೆ ಮಾಡಬಹುದು. ಅಗತ್ಯ ಬಂದರೆ ಕೇಸ್ ಅನ್ನು ಸಿಬಿಐಗೆ ನಾವೇ ಕೋಡುತ್ತೇವೆ. ಮೊದಲು ಅವರು ಪತ್ರ ಬರೆಯಲಿ. ನಾವು ಕ್ಯಾಬಿನೆಟ್ ನಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಪರಮೇಶ್ವರ್ ಹೇಳಿದರು.

ನಮ್ಮ ಲೆಕ್ಕಾಚಾರ ಉಲ್ಟಾ :

ರಾಜ್ಯದಲ್ಲಿ 20 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದೆವು ಆದರೆ ನಾವು ನಿರೀಕ್ಷೆ ಮಾಡಿದಷ್ಟು ಕೇತ್ರಗಳನ್ನು ಗೆಲ್ಲಲು ಆಗಲಿಲ್ಲ. ನಮ್ಮ ಲೆಕ್ಕಾಚಾರ ಉಲ್ಟಾ ಆಗಿದೆ ಆದರೆ ಮತ ಪ್ರಮಾಣದಲ್ಲಿ ಹೆಚ್ಚಳವಾಗಿದೆ.ಕಳೆದ ಬಾರಿ ಒಂದು ಸ್ಥಾನ ಗೆದ್ದಿದ್ದೆವು ಈ ಬಾರಿ 9 ಕ್ಷೇತ್ರಗಳನ್ನು ಗೆದ್ದಿದ್ದೇವೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ ರಾಜ್ಯದಲ್ಲಿ ನಿರೀಕ್ಷೆ ಮಾಡಿದಷ್ಟು ಸ್ಥಾನ ಬಂದಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.

ತುಮಕೂರಿನ ಸೋಲಿನ ಬಗ್ಗೆ ನಾನು ಮತ್ತು ರಾಜಣ್ಣ ನಾಯಕರಿಗೆ ಉತ್ತರ ಕೋಡುತ್ತೇವೆ. ಮೈತ್ರಿ ವರ್ಕೌಟ್ ಆಗಲ್ಲ ಅಂದುಕೊಂಡಿದ್ದೆವು. ತುಮಕೂರಿನಲ್ಲಿ ಇದು ವರ್ಕೌಟ್ ಆಗಿದೆ. ಕೆಲವು ಸಚಿವರಿಗೆ ಹಿನ್ನಡೆ ಆಗಿದೆ. ಅದನ್ನು ಒಪ್ಪಿಕೊಳ್ಳಲೇಬೇಕು ಎಂದು ತಿಳಿಸಿದರು.

Author

Leave a Reply

Your email address will not be published. Required fields are marked *