Dwarakish Death: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

Dwarakish Death ದ್ವಾರಕೀಶ್ ಅವರು, ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಸ್ಥಾನವನ್ನು ಪಡೆದವರು.

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಇಂದು ಇಹಲೋಕ ಯಾತ್ರೆ ಮುಗಿಸಿದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.

ಆಗಸ್ಟ್ 19-1942 ರಂದು ಹುಣಸೂರಿನಲ್ಲಿ ರಾವ್ ಮತ್ತು ಜಯಮ್ಮರವರಿಗೆ ಜನಿಸಿದ ದ್ವಾರಕೀಶ್ ಅವರು, ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಸ್ಥಾನವನ್ನು ಪಡೆದವರು.
ಡಾ.ರಾಜಕುಮಾರ್ ಜೊತೆ ಅವರು ನಟಿಸಿದ ಕೆಲವು ಸಿನಿಮಾಗಳು ಆ ಕಾಲದಲ್ಲೇ ಅಪಾರ ಜನಪ್ರಿಯತೆಯನ್ನು ಪಡೆದಿದ್ದವು. ನಂತರ ಡಾ, ವಿಷ್ಣುವರ್ಧನ್ ಜೊತೆ ಹಲವು ಹಿಟ್ ಚಿತ್ರಗಳನ್ನು ದ್ವಾರಕೀಶ್ ನೀಡಿದ್ದರು.

ಕುಳ್ಳ ಹೆಸರಿನಲ್ಲಿ ಹಲವು ಸಿನಿಮಾಗಳನ್ನು ನೀಡಿದವರು ದ್ವಾರಕೀಶ್, ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್​​ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು. ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು.

1963ರಲ್ಲಿ ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು. ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು

Author

error: