ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
Wayanad Landslide: ದುರಂತಕ್ಕೀಡಾದ ವಯನಾಡ್ ನಲ್ಲಿ 100 ಮನೆಗಳ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ
Wayanad Landslide: ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು
ಹಾಸನ : ಪ್ರವಾಹ ಪೀಡಿತ ವಯನಾಡ್ ಗೆ ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಶಿರಾಡಿ ಘಾಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ಧೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಿದರು.
ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ ಸಿಗಲು ಇನ್ನಷ್ಟು ಸಮಯ ಬೇಕು. ರಕ್ಷಣಾ ಕಾರ್ಯಾಚರಣೆ ಪೂರ್ತಿ ಮುಗಿದ ಬಳಿಕ ತಿಳಿಯಲಿದೆ ಎಂದರು.
ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದರು.
ಮೈಸೂರು ಜಿಲ್ಲಾಡಳಿತವು ವೈದ್ಯರ ತಂಡದೊಂದಿಗೆ 15 ಫ್ರೀಜರ್ ಬಾಕ್ಸ್‌ಗಳು, ನಾಲ್ಕು ಟ್ರಾಕ್ಟರ್ ಮೌಂಟೆಡ್ ಕಂಪ್ರೆಸರ್ ಮತ್ತು ಜಾಕ್ ಹ್ಯಾಮರ್, 500 ಬಾಡಿ ಬ್ಯಾಗ್ ಗಳು, ತುರ್ತು ಸಂದರ್ಭಗಳಲ್ಲಿ ಬಳಸುವ 15 ದೀಪಗಳ ವ್ಯವಸ್ಥೆ, 40 ಸ್ಟ್ರೆಚರ್‌ಗಳು, 288 ಗಮ್‌ಬೂಟ್‌ಗಳು, 5 ಸ್ಟೀಲ್ ಕಟ್ಟರ್‌ಗಳು, 10 ಗ್ಯಾಸ್ ಕಟ್ಟರ್‌ಗಳು, 2040 ನ್ಯಾಪ್‌ಕಿನ್‌ಗಳು, 1000 ಗ್ಲೋವ್‌ಗಳು, 2050 ಮಾಸ್ಕ್‌ಗಳು, 1000 ಬಾಟಲ್ ಸ್ಯಾನಿಟೈಸರ್‌ಗಳು ಹಾಗೂ ಆರೋಗ್ಯ ಇಲಾಖೆಯ ಔ಼ಷಧಿಗಳನ್ನು ಒದಗಿಸಿದೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (KIAL) ವತಿಯಿಂದ 250 ಎಂ.ಎಲ್. ನ 1008 ನೀರಿನ ಬಾಟಲ್‌ಗಳು, 100 ರೇನ್‌ಕೋಟ್‌ಗಳು, 500 ಬಾಟಲ್ ಸ್ಯಾನಿಟೈಸರ್‌ಗಳು, 15 ಟೆಂಟ್‌ಗಳು, 1000 ಪಿಪಿಇ ಕಿಟ್‌ಗಳು, 5000 ಗ್ಲೋವ್‌ಗಳು, 3೦೦೦ 3- ಪ್ಲೈ ಮಾಸ್ಕ್‌ಗಳು ಹಾಗೂ 8000 N-95 ಮಾಸ್ಕ್‌ಗಳನ್ನು ಕಳುಹಿಸಲಾಗಿದೆ.
ವೋಲ್ವೋ ಸಂಸ್ಥೆಯಿಂದ 2000 ಪ್ಯಾಕ್ ಸ್ಯಾನಿಟರಿ ಪ್ಯಾಡ್‌ಗಳು, 100 PPE ಕಿಟ್‌ಗಳು ಹಾಗೂ ಎರಡು ಟ್ರಕ್‌ಗಳನ್ನು ಒದಗಿಸಲಾಗಿದೆ.
ಎಲೆಕ್ಟ್ರಾನಿಕ್ ಸಿಟಿ ಕೈಗಾರಿಕಾ ಸಂಘ(ELCIA) ದ ಸದಸ್ಯ ಸಂಸ್ಥೆಗಳು ಮತ್ತು ಪ್ರಣವ್ ಫೌಂಡೇಷನ್ ವತಿಯಿಂದ 40 ಸ್ಟ್ರೆಚರ್‌ಗಳು, 250 ಬಾಡಿ ಬ್ಯಾಗ್‌ಗಳು, 1000 N-95 ಮಾಸ್ಕ್‌ಗಳು, 500 ಬಾಟಲ್ ಸ್ಯಾನಿಟೈಸರ್‌ಗಳು, 1000 ಗ್ಲೋವ್‌ಗಳು ಹಾಗೂ ಒಂದು ಟ್ರಕ್ ಒದಗಿಸಲಾಗಿದೆ.
ಬಯೋಕಾನ್ ಮತ್ತು ಭಾಗೀದಾರ ಸಂಸ್ಥೆಗಳಾದ ನಾರಾಯಣ ಹೆಲ್ತ್ ಮತ್ತು ಸಿಂಜೀನ್ ಸಂಸ್ಥೆಗಳಿಂದ 2200 ಮಾಸ್ಕ್‌ಗಳು, 100 ಉತ್ತಮ ಗುಣಮಟ್ಟದ ರೇನ್ ಕೋಟ್‌ಗಳು, 400 ಲೀಟರ್ ಸ್ಯಾನಿಟೈಸರ್, 5 ಕಾರ್ಟನ್‌ಗಳಷ್ಟು ಬೆಡ್‌ಶೀಟ್ ಮತ್ತು ಬಟ್ಟೆ ಹಾಗೂ 250 ಪಿಪಿಇ ಕಿಟ್‌ಗಳನ್ನು ಕಳುಹಿಸಲಾಗಿದೆ.
ಆಶಯ ಟ್ರಸ್ಟ್ ಹಾಗೂ ಉತ್ತಿಷ್ಠ ಸ್ವಯಂ ಸೇವಾ ಸಂಸ್ಥೆಯ ವತಿಯಿಂದ 1000 ಬ್ಲಾಂಕೆಟ್ ಮತ್ತು ಟಾರ್ಪಾಲಿನ್‌ಗಳು ಹಾಗೂ ಎರಡು ಅಂಬ್ಯುಲೆನ್ಸ್‌ಗಳನ್ನು ಒದಗಿಸಲಾಗಿದೆ. ಅವರು 25 ಲಕ್ಷ ರೂ. ಆರ್ಥಿಕ ನೆರವು ಒದಗಿಸಿದ್ದಾರೆ.
ವಯನಾಡಿಗೆ ಪರಿಹಾರ ಸಾಮಗ್ರಿಗಳು, ವೈದ್ಯಕೀಯ ಸಲಕರಣೆಗಳು ಮತ್ತಿತರ ನೆರವು ಒದಗಿಸಿ ಮಾನವೀಯತೆ ಮೆರೆದ ಎಲ್ಲ ಸಂಸ್ಥೆಗಳಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.
