ಬೆಳಗಾವಿ : ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ. ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚಿಕ್ಕೋಡಿಯಲ್ಲಿ ಶನಿವಾರ ರಾತ್ರಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ಪೊಲೀಸರು ಬಂಧಿಸಿದ್ದಾರೆ. ಅಪಹರಣಕ್ಕೊಳಗಾದ ಮಹಿಳೆಯನ್ನು ರಕ್ಷಿಸಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ, ಪ್ರಕರಣದ ಕುರಿತು ಪೊಲೀಸರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ತಿಳೀಸಿದರು.

ಇದೇ ವೇಳೆ ರೇವಣ್ಣ ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂಬ ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಪುಟ್ಟರಾಜು ವಕೀಲರೇ ಎಂದು ತಿರುಗೇಟು ನೀಡಿದರು.

ಪೊಲೀಸರೊಂದಿಗೆ ಚರ್ಚೆ ನಡೆಸಿ ಪ್ರಕರಣ ಸಂಬಂಧ ಮಾಹಿತಿ ನೀಡುವುದಾಗಿ ಹೇಳಿದರು.

Author

Leave a Reply

Your email address will not be published. Required fields are marked *